ಉಡುಪಿ: ಪಾಂಗಾಳ ಆರ್ಯಾಡಿ ಶ್ರೀ ಜನಾರ್ದನ ದೇವಸ್ಥಾನದ ಅಡುಗೆಕೋಣೆ ಹಾಗೂ ಗೋಪುರ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ ಮಾ.3ರಂದು ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಡಾ.ಮೋಹನ್ ದಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ, ವೇದಮೂರ್ತಿ ಪಾಡಿಗಾರ ಶ್ರೀನಿವಾಸ ತಂತ್ರಿ, ಕಟ್ಟಡಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷರಾದ ಗೋವಿಂದ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.