ತಮ್ಮ ವಿರುದ್ಧ ದಾಖಲಾಗುತ್ತಿರುವ FIRಗಳನ್ನು ರದ್ದುಗೊಳಿಸಬೇಕೆಂದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಿದ್ದು, ಎಲ್ಲಾ FIRಗಳಿಗೂ ತಡೆ ನೀಡಿದೆ.
ಇದರೊಂದಿಗೆ ನಟ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ದಲಿತ ಸಮುದಾಯಗಳ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಿ ಉಪ್ಪಿ ವಿರುದ್ಧ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಠಾಣೆ ಹಾಗೂ ಚಿಕ್ಕಮಗಳೂರಿನ ಆಲ್ದೂರು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.