ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಕೈಬಿಟ್ಟಿದೆ.

ಈ ಮೂಲಕ ಹೆಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಕಾರಣ ನೀಡಿ ಕೋರ್ಟ್ ಪ್ರಕರಣ ರದ್ದುಗೊಳಿಸಿದೆ. ಬೆಂಗಳೂರಿನ 42ನೇ ಎಂಸಿಜೆಎಂ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಹೊಳೆನರಸೀಪುರದ ಮಹಿಳೆ ನೀಡಿದ ದೂರನ್ನು ಕೋರ್ಟ್ ರದ್ದುಪಡಿಸಿದೆ.




