ಪಾಟ್ನಾ: ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಕಾಠ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಎಳೆದು ವಿವಾದಕ್ಕೆ ಕಾರಣರಾಗಿದ್ದಾರೆ.

ಈ ಘಟನೆ ಮುಖ್ಯಮಂತ್ರಿಗಳ ಸಚಿವಾಲಯದ ಸಂವಾದ್ ಕಾರ್ಯಕ್ರಮದಲ್ಲಿ ನಡೆದಿದೆ. 1,000ಕ್ಕೂ ಹೆಚ್ಚು ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿತ್ತು. ಮುಖಕ್ಕೆ ಹಿಜಾಬ್ ಧರಿಸಿ ಬಂದ ನುಸ್ರತ್ ಪರ್ವೀನ್ ಅವರ ಹಿಜಾಬ್ ಅನ್ನು ನಿತೀಶ್ ಕುಮಾರ್ ಎಳೆಯುವ ದೃಶ್ಯ ವಿಡಿಯೋದಲ್ಲಿ ಕಂಡು ಬಂದಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.




