ಮಂಗಳೂರು: ಮಂಗಳೂರಿನ ಪಡೀಲ್ ಅಂಡರ್ ಪಾಸ್ ಬಳಿ ಸೆ.೧೪ ರಂದು ನಡೆದ ಬೈಕ್ ಅಫಘಾತದಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಮೃತಪಟ್ಟ ವಿದ್ಯಾರ್ಥಿ ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (೨೦) ಎಂದು ಗುರುತಿಸಲಾಗಿದೆ. ಗಾಡ್ವಿನ್ (೧೯) ಮತ್ತು ಆಶಿತ್ (೧೭) ಎಂಬುವ ಇಬ್ಬರು ಗಾಯಗೊಂಡಿದ್ದು, ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಯಾದ ಭವಿನ್ ರಾಜ್ ಅವರು ಗುರುವಾರ ಮಧ್ಯಾಹ್ನ ತನ್ನ ಗೆಳೆಯರ ಜತೆ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಪಡೀಲ್ ಅಂಡರ್‌ಪಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಫುಟ್‌ಪಾತ್‌ಗೆ ಡಿಕ್ಕಿಯಾಗಿ ಮೂವರು ಕೂಡ ಗಾಯಗೊಂಡಿದ್ದು, ಭವಿನ್ ರಾಜ್ ಮೃತಪಟ್ಟಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.