ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: ಸವಾರ ಸಾವು

Share with

ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ಬೈಕ್ ಅಪಘಾತ ನಡೆದಿದೆ.

ಉಡುಪಿ: ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ಬೈಕ್ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕ ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26ವ) ಎಂದು ಗುರುತಿಸಲಾಗಿದೆ. ಯುವಕ ಅವಿವಾಹಿತನಾಗಿದ್ದು, ಅಡಿಗೆ ವೃತ್ತಿ ಮಾಡಿಕೊಂಡಿದ್ದರು. ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡಿಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುವ ಸಮಯ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಕೆ.ಎಂ.ಸಿಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.


Share with

Leave a Reply

Your email address will not be published. Required fields are marked *