ಮಂಗಳೂರು: ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಾರು ಹಾಗೂ ಬೈಕ್ ಅಪಘಾತವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಹಸವಾರೆ ಮೃತಪಟ್ಟ ಘಟನೆ ನಡೆದಿದೆ.
ಸಹಸವಾರೆ ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರ ಬಂಟ್ವಾಳ ತಾಲೂಕಿನ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ಗುರುತಿಸಲಾಗಿದೆ.
ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೂಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.