ನೆಲ್ಯಾಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.