ಬಂಟ್ವಾಳ: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಪಾಣೆಮಂಗಳೂರಿನ ಸೇತುವೆಯಲ್ಲಿ ಸೆ.24 ರಂದು ನಡೆದಿದೆ.
ಸಜಿಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಎಂಬವರ ಪುತ್ರ ರಾಜ್ ಕುಮಾರ್ ಮೃತ ಪಟ್ಟ ವ್ಯಕ್ತಿ ಎಂದು ತಿಳಿದುಬಂದಿದ್ದು, ಅವರು ವಾಮದಪದವಿನ ಜಾಗದಲ್ಲಿ ಕೃಷಿ ಮಾಡಿಕೊಂಡಿದ್ದರು. ಅವರು ವಾಮದಪದವಿನಿಂದ ಸಜಿಪದಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ರಾಜ್ ಕುಮಾರ್ ಅವರು ಬೈಕಿನಲ್ಲಿ ತೆರಳುತ್ತಿದ್ದು, ಅವರ ಬೈಕ್ ಪಾಣೆಮಂಗಳೂರು ಸೇತುವೆ ಬಳಿ ತಲುಪಿದಾಗ ಎದುರಿನಿಂದ ಬಂದ ಜಲ್ಲಿಕಲ್ಲು ಸಾಗಾಟದ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಾಜ್ ಕುಮಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.