ಮಂಗಳೂರು: ಮಂಗಳೂರಿನ ಕುಂಜತ್ ಬೈಲ್‌ನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ನಿಂದ ಕುಂಜತ್ತಬೈಲಿನಲ್ಲಿ ದಾಮೋದರ ಆರ್.ಸುವರ್ಣ ಸ್ಮಾರಕ ‘ಬಿಲ್ಲವ ಹಾಸ್ಟೆಲ್’ ನಿರ್ಮಿಸಲಾಗಿದ್ದು, ಸೆ.24 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಯೂನಿಯನ್ ಅದ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಟ್ಟಡ ಉದ್ಘಾಟಿಸಲಿದ್ದು, ಮುಖಂಡ ಬಿ.ಜನಾರ್ದನ ಪೂಜಾರಿ ಅವರು ಜ್ಯೋತಿ ಬೆಳಗಿಸುವರು.
ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ಸಂಸದರಾದ ಡಿ.ವಿ ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯೂನಿಯನ್ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್.ಸುವರ್ಣ, ಬಿಲ್ಲವ ಹಾಸ್ಟೆಲ್ ಉದ್ಘಾಟನಾ ಕಾರ್ಯಕ್ರಮದ ಖಜಾಂಚಿ ಕಾಶಿನಾಥ್ ಹಾಗೂ ಯೋಗೀಶ್ ಕುಮಾರ್ ಇದ್ದರು.