ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ ಸಮಾರಂಭ

Share with

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿರುವೆರ್   ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ ಸಮಾರಂಭ ದಿನಾಂಕ 2 -2 -2025 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 8:00 ರಿಂದ ಕಡೇಶಿವಾಲಯ ಗ್ರಾಮದ ಪೆರ್ಲಾಪು ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ಜರಗಲಿರುವುದು.

ಬೆಳಿಗ್ಗೆ  8 ಗಂಟೆ ಸರಿಯಾಗಿ ಶ್ರೀ ನಾರಾಯಣ  ಗುರುಪೂಜಾ ಕಾರ್ಯಕ್ರಮ ನಡೆಯಲಿದ್ದು ಬಳಿಕ ಸಂಘದ ಗೌರವಾಧ್ಯಕ್ಷರಾದ ಮೋಹನ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿರುವುದು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳು  ಜಾನಪದ ವಿದ್ವಾಂಸ ಬನ್ನಂಜೆ  ಬಾಬು ಅಮೀನ್ ಪ್ರಧಾನ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಸಜೀಪ ಮುನ್ನೂರು ಮುರ್ತೆದಾರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ, ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸ್ಥಾಪಕ ಅಧ್ಯಕ್ಷರಾದ ಲೋಕೇಶ್ ಕೋಡಿಕೆರೆ, ಉಡುಪಿ ನಿರ್ಮಿತಿ ಕೇಂದ್ರದ ಪ್ರಭಾರ ಯೋಜನಾ ನಿರ್ದೇಶಕರಾದ ದಿವಾಕರ ಪೂಜಾರಿ, ಯುವವಾಹಿನಿ (ರಿ.)ಉಪ್ಪಿನಂಗಡಿ ಘಟಕದ ಮಹಿಳಾ ಸಂಘಟನಾ  ನಿರ್ದೇಶಕಿ ವನಿತ ಕೃಷ್ಣಪ್ಪ ಪೂಜಾರಿ ಮೊದಲಾದವರು ಭಾಗವಹಿಸಲಿರುವರು.

ಈ ಸಂದರ್ಭದಲ್ಲಿ ಸಮಾಜದ ಸಾಧಕರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ, ಹಾಗೂ  ವಿವಿಧ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿರುವುದು ಎಂದು ಬಿರುವೆರ್  ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯದ ಪ್ರಧಾನ ಕಾರ್ಯದರ್ಶಿ ಯಶವಂತ್ ಸಾಲ್ಯಾನ್ ಪತ್ತು ಕೊಡಂಗೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Share with

Leave a Reply

Your email address will not be published. Required fields are marked *