ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಶ್ರೀಕೃಷ್ಣನ ದರ್ಶನ ಪಡೆದರು.


ಬಳಿಕ ಪರ್ಯಾಯ ಪುತ್ತಿಗೆ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಪುತ್ತಿಗೆ ಶ್ರೀಗಳು ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಆಶೀರ್ವದಿಸಿ ಗೌರವಿಸಿದರು. ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಕೋಟ ಅವರು ಮಠ, ಮಂದಿರ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಪಕ್ಷದ ಮುಖಂಡರನ್ನು ಭೇಟಿಯಾಗಿ ಬೆಂಬಲ ಯಾಚಿಸುತ್ತಿದ್ದಾರೆ.




