ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮುದ್ದಹನುಮೇಗೌಡರು ಸೋಲು ಕಂಡಿದ್ದಾರೆ. ಕಳೆದ ವಿಧಾನಸಭೆಯಲ್ಲಿ ವರುಣ, ಚಾಮರಾಜನಗರ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಸೋಮಣ್ಣ ಸೋಲುಂಡಿದ್ದರು. ಆದರೂ ಮತ್ತೆ ತುಮಕೂರಿನಿಂದ ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ಮಾಡಲಾಗಿತ್ತು. ಬಿಜೆಪಿಗೆ ಹೋಗಿ ಮತ್ತೆ ಕಾಂಗ್ರೆಸ್‌ಗೆ ಬಂದಿದ್ದ ಮುದ್ದಹನುಮೇಗೌಡರು ಟಿಕೆಟ್ ಪಡೆದಿದ್ದರು. ಆದರೆ ಸೋಲು ಅನುಭವಿಸಿದ್ದಾರೆ.