2024ರ ಲೋಕಸಭೆ ಚುನಾವಣೆಯ ಸಿದ್ಧತೆ ಮತ್ತು ಕಾರ್ಯಕ್ರಮಗಳ ರೂಪುರೇಷೆಗಾಗಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆರಂಭವಾಗಿದೆ.
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು, ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಹಿರಿಯ ನಾಯಕರು ಮುಂಚೂಣಿ ಸಂಘಟನೆಗಳು ಮತ್ತು ರಾಜ್ಯ ಘಟಕಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಲಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಡಿ.ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಪಾಲ್ಗೊಂಡಿದ್ದಾರೆ.