ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭವು ಜ.30ರಂದು ಸಂಜೆ 4:30ಗಂಟೆಗೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗಮಿಸಲಿದ್ದಾರೆ.
ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರು ಪ್ರಸಕ್ತ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
ಈ ಸಮಾರಂಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲೆಯ ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ, ಎಂ.ಎಲ್.ಸಿ ಪ್ರತಾಪ ಸಿಂಹ ನಾಯಕ್ ಸಹಿತ ಬಿಜೆಪಿ ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ.