ರಾಹುಲ್ ಗಾಂಧಿ ಚುನಾವಣಾ ಅಕ್ರಮದ ಬಗ್ಗೆ ಹೇಳಿಕೆ ನೀಡಿ ದೇಶ & ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ BJP ಆ.5ರಂದು ವಿಧಾನಸೌಧದ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ನೀಡಲಿದ್ದೇವೆ. ರಾಹುಲ್ ಗಾಂಧಿಯವರು ಇದೇ 5ರಂದು ಬೆಂಗಳೂರಿನಲ್ಲಿ ನಾಟಕ ಮಾಡಲು ಹೊರಟಿದ್ದಾರೆ ಎಂದು ದೂರಿದ್ದಾರೆ.




