ಉಪ್ಪಳ: ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಪಜ್ವರವರ ಚುನಾವಣಾ ಪ್ರಚಾರಾರ್ಥವಾಗಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಮಹಿಳಾ ಸಮಾವೇಶ ಏಪ್ರಿಲ್.10 ರಂದು ಮಧ್ಯಾಹ್ನ 2.30ಕ್ಕೆ ಕುಂಬಳೆ ಕೋ ಆಪರೇಟಿವ್ ಬ್ಯಾಂಕ್ ಹಾಲ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಂಚಾಲಕರಾದ ಪ್ರೇಮಲತಾ .ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ದ.ಕ ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕಿ ಕುಮಾರಿ ಬಾಗೀರಥಿ ಮುರುಳ್ಯ ಉದ್ಘಾಟಿಸುವರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಅಡ್ವಕೇಟ್ ಶ್ರೀಕಾಂತ್ ಪ್ರಧಾನ ಭಾಷಣ ಮಾಡುವರು. ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಮೊದಲಾದವರು ಭಾಗವಹಿಸುವರು.