ಮಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಗೆಲುವಿನ ಸಂಭ್ರಮದ ನಡುವೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪದ ಹಿನ್ನೆಲೆ ಫೆ.28ರಂದು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆಯನ್ನು ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡರು. ಕಾಂಗ್ರೆಸ್ ಕಚೇರಿ ಒಳಗೆ ನುಗ್ಗದಂತೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಮಪ್ ಅರ್ಗವಾಲ್ ಅವರು ಭೇಟಿ ನೀಡಿದ್ದಾರೆ.