ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ
ಹನ್ನೊಂದನ್ನೆ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 1 ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,51,991 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 3,43,063 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 1,08,928 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 14,013 ಮತಗಳು ಬಿದ್ದಿವೆ.