ಪುತ್ತೂರು: ಪುತ್ತೂರಿನ ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಕಾರವಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಪ್ರಕರಣದ ಆರೋಪಿಯಾಗಿದ್ದು, ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ ನಲ್ಲಿ ಹಾಡುಗಳನ್ನು ಹಾಡುತಿದ್ದಳು.
2020ರಲ್ಲಿ ಆ್ಯಪ್ ಮೂಲಕ ಆರೋಪಿಯ ಪರಿಚಯವಾಗಿದ್ದು, ಪರಿಚಯ ಸ್ನೇಹಕ್ಕೆ ತಿರುಗಿ ಪರಸ್ಪರ ಒಬ್ಬರನೊಬ್ಬರು ಇಷ್ಟಪಟ್ಟಿದ್ದಾರೆ.
2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಮ್ ಮಾಡಿದ್ದು, ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆರೋಪಿಸಿ ಮಹಿಳೆಯು ದೂರು ದಾಖಲಿಸಿದ್ದಾರೆ.
ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಮಾತ್ರವಲ್ಲದೇ ವಿಡಿಯೋ ಕಾಲ್ ಮಾಡಿ ಕೂಡ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆಯನ್ನು ಇಟ್ಟಿದ್ದು, ಮಹಿಳೆ ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.