ಕಾಸರಗೋಡು: ಚಂದೇರದ ರೈಲ್ವೇ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿ ಬೇಡಗಂ ಕರಿವೇಡಂಗ ನಿವಾಸಿ ಎಂದು ಶಂಕಿಸಲಾಗಿದೆ. ಮಂಗಳೂರು ಕೋಯಂಬತ್ತೂರು ಫಾಸ್ಟ್ ಪ್ಯಾಸೆಂಜರ್ ರೈಲುಗಾಡಿಯಿಂದ ಬಿದ್ದು ಸಾವಿಗೀಡಾಗಿರಬೇಕೆಂದು ಪೊಲೀಸರು ಸಂಶಯಿಸಿದ್ದಾರೆ. ರೈಲು ಗಾಡಿಯಲ್ಲಿ ಪ್ರಯಾಣಿಸುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದು, ಆಕಸ್ಮಿಕವಾಗಿ ರೈಲು ಗಾಡಿಯಿಂದ ಹೊರಗೆ ಎಸೆಯಲ್ಪಟ್ಟು ಸಾವಿಗೀಡಾಗಿರಬೇಕೆಂದು ಪೊಲೀಸರು ತಿಳಿಸಿದ್ದಾರೆ. ಬೇಡಗಂ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.




