ಕಾಸರಗೋಡು: ಇಲ್ಲಿನ ಬೋವಿಕಾನ ಬಳಿಯ ಎರಿಂಜಿಪುಯ ಹೊಳೆಯಲ್ಲಿ ಸ್ನಾನಕ್ಕಿಳಿದಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.


ಸ್ಥಳೀಯ ನಿವಾಸಿ ರಿಯಾಝ್ (16) ಎಂಬವರ ಮೃತದೇಹ ಪತ್ತೆಯಾಗಿದ್ದು, ಯಾಸಿನ್(13), ಸಮದ್ (13) ಎಂಬವರು ನಾಪತ್ತೆಯಾಗಿದ್ದಾರೆ.
ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಮಧ್ಯಾಹ್ನ ಮೂವರು ಸ್ನಾನಕ್ಕಿಳಿದ ಸಂದರ್ಭ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.




