ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು! ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಕುಟುಂಬಸ್ಥರು

Share with

ಪುತ್ತೂರು: ಸುಳ್ಯ ಶಾಂತಿನಗರ ನಿವಾಸಿ 17 ವರ್ಷ ಪ್ರಾಯದ ಬಾಲಕ ಹೊಟ್ಟೆನೋವೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಡೆಸಿದ ಬಳಿಕ ಸರಿಯಾದ ಉಪಕರಣವಿಲ್ಲವೆಂದು ರೋಗಿಯನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿದ್ದರು. ಆ ವೇಳೆಗಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದರು ತಿಳಿಸಿದ್ದು, ಬಾಲಕನ ಸಾವಿನ ಹಿಂದೆ ಕುಟುಂಬದವರು ಸಂಶಯ ವ್ಯಕ್ತಪಡಿಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಪುತ್ತೂರು ಖಾಸಗಿ ಆಸ್ಪತ್ರೆ ಮುಂಭಾಗದಲ್ಲಿ ಮೃ ಬಾಲಕನ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಶ್ರೀಜಿತ್‌ಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆ. 13ರಂದು ನೋವು ಉಲ್ಬಣಗೊಂಡು ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕರೆತಂದಿದ್ದರು. ಬಳಿಕ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದು ಬಾಲಕನಿಗೆ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದಾಗ ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಮನೆಯವರು ಕರೆತಂದಿದ್ದಾರೆ. ಅಲ್ಲಿ ಆ.13ರಂದು ಸಂಜೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಬಳಿಕ ಬಾಲಕನ ಸ್ಥಿತಿ ಗಂಭೀರವಾದಾಗ ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ಕೊಂಡೊಯ್ಯುವಂತೆ ಅಲ್ಲಿಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಆ.14ರಂದು ಬೆಳಿಗ್ಗೆ ಆತನನ್ನು ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತ ಬಾಲಕ ತಾಯಿ ಪ್ರೇಮ, ಸಹೋದರ ಶ್ರೀನಿತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇದೀಗ ಬಾಲಕನ ಸಾವಿಗೆ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರು ಕಾರಣವೆಂದು ಬಾಲಕನ ಪೋಷಕರು ಮತ್ತು ಕುಟುಂಬಸ್ಥರು ಆರೋಪಿಸಿ ಬಾಲಕನ ಮೃತ ಶವವನ್ನು ಪುತ್ತೂರು ಖಾಸಗಿ ಆಸ್ಪತ್ರೆಯ ಮುಂದಿಟ್ಟು ಧರಣಿ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *