ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತ್ಯು; ಆಸ್ಪತ್ರೆ ಎದುರು ಪ್ರತಿಭಟನೆ..!

Share with

ಸುರತ್ಕಲ್‌: ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.

ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದ್ದು, ಸ್ಥಳಕ್ಕೆ ಸಿಪಿಐಎಂ ಮುಖಂಡರಾದ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಿಸಿದರು.

ಆಸ್ಪತ್ರೆ ಎದುರು ಪ್ರತಿಭಟನೆ.

ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಆಗ್ರಹಿಸಿದರು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಮೇರೆಗೆ ಜಿಲ್ಲಾ ವೈದ್ಯಾಧಿಕಾರಿ ಡಾ| ತಿಮ್ಮಯ್ಯ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮುಖಂಡರು, ಮೃತರ ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ಘೋಷಿಸಿದರು. ಕಾಲಮಿತಿಯ ಒಳಗಡೆ ವರದಿ ಪಡೆದು ಕ್ರಮ ಕೈಗೊಳ್ಳುವುದು, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್‌ ಮುಕ್ಕದಲ್ಲಿ ನ.21ರಂದು ರಾತ್ರಿ 8 ಗಂಟೆಗೆ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎನ್ನಲಾಗಿದೆ. ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮವಾಗಿ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.

ನ.22ರಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು ಮಧ್ಯಾಹ್ನ ಆದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.


Share with

Leave a Reply

Your email address will not be published. Required fields are marked *