ವೀಕ್ಷಕವಾಣಿ: ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ರಜೆ ಇದ್ದ ಕಾರಣ ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ ಘಟನೆ ಜು.16 ರಂದು ಸಂಜೆ ನಡೆದಿದೆ.
ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.