ಮಂಜೇಶ್ವರ: ಪಟ್ಟತ್ತೂರು ಬಲ್ಲಂಗುಡೇಲು ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದ ಮತ್ತು ಶ್ರೀ ವೀರಪುತ್ರ ದೈವದ ದೈವಸ್ಥಾನದ ಹಾಗೂ ಪರಿವಾರ ದೈವಗಳ ನೂತನ ಗರ್ಭಗುಡಿಯ ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಫೆ.24ರಿಂದ 26ರ ತನಕ ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
24ರಂದು ಮಧ್ಯಾಹ್ನ 2.30ಕ್ಕೆ ಅಂಗಡಿಪದವು ಕೊರಗಜ್ಜ ಗುಡಿ ಬಳಿಯಿಂದ ಹೊರದೂವ ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತೆಗೆ ನಾರಾಯಣ ಭಗವತೀ ಪೂಜಾರಿ ಪಟ್ಟತ್ತೂರು ಚಾಲನೆ ನೀಡುವರು. ಸಂಜೆ 6ಕ್ಕೆ ತಂತ್ರಿವರ್ಯರಿಗೆ ಹಾಗೂ ಕೊಂಡೆವೂರು ಸ್ವಾಮೀಜಿಯವರಿಗೆ ಪೂರ್ಣಕುಂಬ ಸ್ವಾಗತ, ಸಂಜೆ 6.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನೆ ನೀಡುವರು.
ಕ್ಷೇತ್ರದ ತಂತ್ರಿವರ್ಯರಾದ ಮೂಡುಮನೆ ಡಾ.ಶ್ರೀ ಅಶೋಕ ರಾಮಚಂದ್ರ ಪದಕಣ್ಣಾಯ ದೀಪ ಪ್ರಜ್ವಲನೆಗೊಳಿಸುವರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಕರಿಬೈಲು ಅಧ್ಯಕ್ಷತೆ ವಹಿಸುವರು. ವಿವಿಧ ವಲಯಗಳ ಗಣ್ಯರು ಭಾಗವಹಿಸುವರು. ರಾತ್ರಿ 7.30ರಿಂದ ಸಾಮೂಹಿಕ ಪ್ರಾರ್ಥನೆ ಸಹಿತ ವಿವಿಧ ವೈಧಿಕ ಕಾರ್ಯಕ್ರಮ, 25ರಂದು ಬೆಳಿಗ್ಗೆ 6ಕ್ಕೆ ಗಣಹೋಮ, ಪ್ರಾಯಶ್ಚಿತ ಹೋಮ, ಬಿಂಬ ಶುದ್ದಿ, ಮಧ್ಯಾಹ್ನ 12ಕ್ಕೆ ಚಂಡಿಕಾಹೋಮ, ಪ್ರಸಾದ ವಿತರಣೆ, ಅನ್ನದಾನ, ಪೂರ್ವಾಹ್ನ 10ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು.
ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿದೀಪ ಪ್ರಜ್ವಲನೆಗೊಳಿಸುವರು. ಕ್ಷೇತ್ರದ ತಂತ್ರಿವರ್ಯರಾದ ಮೂಡುಮನೆ ಡಾ.ಅಶೋಕ ರಾಮಚಂದ್ರ ಪದಕಣ್ಣಾಯ, ಬಾಯಾರು ಚಿತ್ರಮೂಲ ಮಠದ ವೇದಶ್ರೀ ಪಧ್ಮನಾಭ ಶರ್ಮ ಹಾಗೂ ವಿವಿಧ ವಲಯಗಳ ಗಣ್ಯರು ಭಾಗವಹಿಸುವರು. ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ಜಯರಾಮ ಬಲ್ಲಂಗುಡೇಲು ಅಧ್ಯಕ್ಷೆತೆ ವಹಿಸುವರು. ಮಧ್ಯಾಹ್ನ 2ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಸಂಜೆ 4ರಿಂದ ಮೋಕ್ಷಾ ಸಂಗ್ರಾಮ ಯಕ್ಷಗಾನ, ರಾತ್ರಿ 7ಕ್ಕೆ ಮಂಚಾದಿವಾಸ ಹೋಮ ಸಹಿತ ವೈಧಿಕ ಕಾರ್ಯಕ್ರಮ, ರಾತ್ರಿ 8.30ರಿಂದ ವಿವಿಧ ಭಜನಾ ಸಂಘಗಳಿಂದ ಭಜನಾ ಕಾರ್ಯಕ್ರಮ, 26ರಂದು ಬೆಳಿಗ್ಗೆ 8ಕ್ಕೆ ಗಣಹೋಮ, ಪುಣ್ಯಾವಾಚನ, ಬೆಳಿಗ್ಗೆ 9ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕೊಮ್ಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡುವರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲ ಎಂ. ಬಂದ್ಯೋಡು ಅಧ್ಯಕ್ಷತೆ ವಹಿಸುವರು. ಕ್ಷೇತ್ರದ ತಂತ್ರಿವರ್ಯರಾದ ಮೂಡುಮನೆ ಡಾ.ಶ್ರೀ ಅಶೋಕ ರಾಮಚಂದ್ರ ಪದಕಣ್ಣಾಯ ದಿವ್ಯ ಉಪಸ್ಥಿತರಿರುವರು. ಸಮಿತಿ ಗೌರ್ವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ದೀಪ ಪ್ರಜ್ವಲನೆಗೊಳೀಸುವರು. ಸ್ಮರಣೆ ಸಂಚಿಕೆ ವಿಶ್ವರೂಪಿಣಿ ಬಿಡುಗಡೆಯನ್ನು ಮುಂಡಪಲ್ಲ ರಾಜರಾಜೇಶ್ವರೀ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ ಮುಂಡಪಲ್ಲ ಬಿಡುಗಡೆಗೊಳಿಸುವರು. ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಸಹಿತ ವಿವಿಧ ವಲಯಗಳ ಗಣ್ಯರು ಭಾಗವಹಿಸುವರು. ಮಧ್ಯಾಹ್ನ 11.17ರ ಮುಹೂರ್ತದಲ್ಲಿ ಶ್ರೀ ಪಾಡಾಂಗರೆ ಭಗವತೀ ಮಾತೆಯ ಹಾಗೂ ವೀರಪುತ್ರ ದೈವದ ಬ್ರಹ್ಮಕಲಶಾಭಿಷೇಕ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.