ಉಡುಪಿ: ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿರುವ ವಿಲ್‌ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಪನಿಯ ಖಾತೆಯ ಲಾಕರ್ ನಲ್ಲಿದ್ದ 3,25,000ರೂ. ಹಣವನ್ನು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ ಎಂಬಾತನು ಕಳ್ಳತನ ಮಾಡಿಕೊಂಡು ಹೋಗಿದ್ದು, ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.