ಬೆಳ್ಳಂಬೆಳ್ಳಗೆ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬರ್ಬರ ಹತ್ಯೆ..!

Share with

ಉಳ್ಳಾಲ: ತೊಕ್ಕೊಟ್ಟು ಫೈಓವರ್‌ನಲ್ಲಿ ಬೈಕ್ ಅಡ್ಡಗಟ್ಟಿ ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್‌ (40)ನನ್ನು ತಂಡವೊಂದು ತಲ ವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ. ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.

ಮೊದಲ ಹತ್ಯೆ ಯತ್ನ ವಿಫಲ

2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆರಿಫ್ ಮೇಲೆ ಕೊಲೆಗೆ ಯತ್ನ ನಡೆದಿದ್ದು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್‌ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.


Share with

Leave a Reply

Your email address will not be published. Required fields are marked *