ಬೆಳ್ತಂಗಡಿ: ಚಾರ್ಮಾಡಿ ಪೇಟೆಯಲ್ಲಿ ರವಿವಾರ ಸಂಜೆ ಉಜಿರೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಪರಿಣಾಮ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಯಿತು. ಬಸ್ ಟೆಂಪೊವಿಗೂ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸೋಮವಾರ ಸಂಜೆ ಟೆಂಪೋವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಟೆಂಪೋದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.




