ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 9ನೇ ತಿರುವಿನ ಬಳಿ ದಾವಣಗೆರೆ ಕಡೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಉಜಿರೆ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಜೂ.29 ರಂದು ನಡೆದಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು ಕಾರು ಜಖಂ ಗೊಂಡಿದೆ. ಘಟನೆಯಿಂದ ಘಾಟಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬಂದಿದೆ.