ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಹಾಗೂ ಪರಿಷ್ಕರಣೆ ವೇತನ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ. 5ರಿಂದ ರಾಜ್ಯದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯ ಆರ್.ಎಫ್. ಕವಳಿಕಾಯಿ ತಿಳಿಸಿದ್ದಾರೆ.

ಆ. 4ರ ಒಳಗೆ ಸರ್ಕಾರ ಸಂಘಟನೆಗಳ ಜೊತೆ ಚರ್ಚಿಸಿ ಬೇಡಿಕೆ ಈಡೇರಿಸಲು ಒಪ್ಪಿಗೆ ನೀಡಿದರೆ, ಮುಷ್ಕರ ಹಿಂಪಡೆಯಲು ಸಿದ್ಧರಿದ್ದೇವೆ ಎಂದಿದ್ದಾರೆ.




