ಮಂಗಳೂರು: ಅ.30ರಂದು ಬೆಳಗ್ಗೆ ಉದ್ಯಮಿಯೋರ್ವರು ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ಪ್ರಸನ್ನ(37) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
2019ರಲ್ಲಿ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ನಂತರ ಈ ಸೇತುವೆಯಲ್ಲಿ ಸರಣಿ ಆತ್ಮಹತ್ಯೆಗಳಾಗಿತ್ತು. ಹೀಗಾಗಿ 2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತಡೆಬೇಲಿಯನ್ನು ಅಳವಡಿಸಿತ್ತು. 2020ರ ನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿದ್ದವು. ಆದರೆ, ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆತ್ಮಹತ್ಯೆ ಮೂಲಕ ನೇತ್ರಾವತಿ ಸೇತುವೆ ಸುದ್ದಿಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.