G20 ಶೃಂಗ ಸಭೆಯಲ್ಲಿ ಪಾಲ್ಗೊಂಡ ನಂತರ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ವಿಯೆಟ್ನಾಂಗೆ ತೆರಳಿದರು. ಇಂದು ಬೆಳಗ್ಗೆ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿ, ನಂತರ ಅವರು ವಿಮಾನ ನಿಲ್ದಾಣ ತಲುಪಿದರು. ಅಲ್ಲಿಂದ ತಮ್ಮ ಏರ್‌ಫೋರ್ಸ್ ಒನ್ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದ ಬೈಡನ್ ಮೊದಲ ದಿನವೇ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.