ಉಡುಪಿ: ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

Share with

ಉಡುಪಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿ ಮಾ.13ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿಯಲ್ಲಿ ಮಾ.13ರಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ಮಾ.14ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.


Share with

Leave a Reply

Your email address will not be published. Required fields are marked *