ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ. ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಕೂಲಂಕುಷ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಒಂದು ವೇಳೆ ಕ್ಯಾನ್ಸರ್ ಅಂಶ ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.




