ತೀರ್ಥಹಳ್ಳಿ : ಆಗುಂಬೆ ಸಮೀಪದ ಕೌರಿಹಣ್ಣು ಬಳಿ ರವಿವಾರ ಬೆಳಗ್ಗೆ ಭೀಕರ ಕಾರು ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಓದುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ರಾಯಚೂರು ಜಿಲ್ಲೆಯ ಚೇತನ್ (28) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಒಟ್ಟು 5 ಮೆಡಿಕಲ್ ವಿದ್ಯಾರ್ಥಿಗಳು ಆಗುಂಬೆ ಪ್ರವಾಸಕ್ಕೆ ಬಂದಿದ್ದರು. ಕಾರಿನಲ್ಲಿ ಬರುವಾಗ ನಿದ್ರೆ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಅಪ್ಪಳಿಸಿ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ
ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ವಿವರಗಳು ಮತ್ತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.




