ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಯುವಕ ದಾರುಣವಾಗಿ ಮೃತಪಟ್ಟಿದ್ದಾರೆ.
ಸೋಮವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತಪಟ್ಟ ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್(25) ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸುಧೀರ್ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಈದು ಗ್ರಾಮದ ಸುಧೀರ್ ಕಡಬದ ಫೈನಾನ್ಸ್ ಒಂದರಲ್ಲಿ ಉದ್ಯೋಗಿಯಾಗಿದ್ದರು.ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ