ಚಿಕ್ಕಮಗಳೂರು: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾದ ಘಟನೆ ಡಿ. 7ರ ರವಿವಾರ ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಲಹರಿ (6) ಸ್ಥಳದಲ್ಲೇ ಮೃತಪಟ್ಟ ಬಾಲಕಿ. ಆಕೆಯ ಸಹೋದರಿ ಸಿರಿ (8), ತಂದೆ ಪುನೀತ್ (37) ಹಾಗೂ ತಾಯಿ ಚೈತ್ರ (34) ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಪತ್ನಿ, ಇಬ್ಬರು ಮಕ್ಕಳೊಂದಿಗೆ ಪುನೀತ್ ಬೈಕಿನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಗಾಯಾಳುಗಳಿಗೆ ಚಿಕ್ಕಮಗಳೂರು ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಂಬಳೆ ಗ್ರಾಮದ ಪುನೀತ್, ಬೈರಂಬುದಿ ಗ್ರಾಮದಿಂದ ಸ್ವ ಗ್ರಾಮಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಲಹರಿಯ ಮೃತದೇಹ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




