ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿ-ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಆರು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮಾ.11ರಂದು ಮಧ್ಯಾಹ್ನ ನಡೆದಿದೆ.
ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನಿಗೆ ಕಾರನ್ನು ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಎದುರುಗಡೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿ ನಿಂತಿದೆ.
ಘಟನೆಯಿಂದ ಒಟ್ಟು ಆರು ಮಂದಿ ಗಾಯಗೊಂಡಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ, ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಕಾರು ಹಾಗೂ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ.