
ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿಯ ಸಿಂಗಾಪುರ ಗ್ರಾಮದ ಸಮೀಪ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಟ್ಯಾಂಕರ್ ರಸ್ತೆಯಲ್ಲಿ ನಿಂತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ. ಗ್ಯಾಸ್ ಟ್ಯಾಂಕರ್ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯ ಸ್ಥಳೀಯರಿಂದ ವ್ಯಕ್ತವಾಗಿದೆ.




