ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ; ಮೂವರು ಸಜೀವ ದಹನ

Share with

ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದು, ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಹುಳಿಯಾರು ಬಳಿ ಕೋರಗೆರೆ ಸೇತುವೆ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರು ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *