ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ; ಕಾರು ಚಾಲಕನ ವಿರುದ್ಧ ಪ್ರಕರಣ

Share with

ಮಂಗಳೂರು: ಮಹಾಕಾಳಿ ಪಡ್ಡು ಬಳಿ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಗಿರೀಶ್ ಕುಮಾರ್ ಪಿ.ಎಂ. ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾರು ಚಾಲಕ ಸಮೃದ್ ಭಟ್ ಮೇಲೆ ಪ್ರಕರಣ ದಾಖಲಾಗಿದೆ.

ಗಿರೀಶ್ ಕುಮಾರ್ ಪಿ.ಎಂ. ಅವರು ಈ ಬಗ್ಗೆ ಠಾಣೆಗೆ ದೂರು ನೀಡಿದ್ದು, ನ. 5 ರಂದು ಮಹಾಕಾಳಿ ಪಡ್ಡು ಬಳಿ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸುತ್ತಿದ್ದಾಗ ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಕೇರಳ ನೋಂದಣಿಯ ಆಮ್ಮಿ ಕಾರು ಬಂದಿತ್ತು. ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಸೀಟ್ ಬೆಲ್ಟ್ ಧರಿಸಿಲ್ಲದಿರುವುದನ್ನು ಕಂಡು ಕಾರು ನಿಲ್ಲಿಸಿದ್ದರು. ಕಾರಿನಲ್ಲಿದ್ದ ವ್ಯಕ್ತಿ ಉಡಾಫೆಯಿಂದ ವರ್ತಿಸಿ, ವಾಹನದ ದಾಖಲೆಗಳನ್ನು ಹಾಜರುಪಡಿಸಲು ನಿರಾಕರಿಸಿದ್ದ ಎನ್ನಲಾಗಿದೆ. ಸೀಟ್ ಬೆಲ್ಟ್ ಧರಿಸದೆ ಇರುವುದನ್ನು ಮರೆಮಾಚಲು ಕಾಗದವನ್ನು ಅಡ್ಡಹಿಡಿದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

ವಾಹನದ ದಾಖಲೆಗಳನ್ನು ಹಾಜರುಪಡಿಸದ ಕಾರಣ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದಾಗ, ವ್ಯಕ್ತಿಯು ಅವರ ಕೈಯನ್ನು ದೂಡಿ, ವಾಹನವನ್ನು ಸ್ಟಾರ್ಟ್ ಮಾಡಿದ್ದಾನೆ. ಘಟನೆಯ ವೀಡಿಯೋ ಮಾಡಿ ಅದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿ ಸ್ಥಳದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *