
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆ ನೀಡಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ.8 ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಈ ಹೇಳಿಕೆ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.