ಕೇಸರಿ ಧ್ವಜ ಇಟ್ಟ ಆರೋಪ: ಶರಣ್ ಪಂಪ್‌ವೆಲ್‌ ವಿರುದ್ಧ ಪ್ರಕರಣ ದಾಖಲು

Share with

ಶರಣ್ ಪಂಪ್‌ವೆಲ್‌ ವಿರುದ್ಧ ಪ್ರಕರಣ ದಾಖಲು.

ಮಂಗಳೂರು: ಅ.16ರಂದು ದಕ್ಷಿಣ ಕನ್ನಡ ಜಿಲ್ಲಾ ವಿಶ್ವ ಹಿಂದೂ ಪರಿಷತ್‌ನ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ ಅವರು ತನ್ನ ಬೆಂಬಲಿಗರೊಂದಿಗೆ ಬಂದು ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿರುವ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದು, ಆ ಬಳಿಕ ಎಲ್ಲಾ ಹಿಂದೂಗಳಿಗೆ ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ಸಮುದಾಯದ ವ್ಯಾಪಾರಸ್ಥರು ಹೊಂದಿರುವ ಅಂಗಡಿಗಳಲ್ಲಿ ಮಾತ್ರ ತೆಗೆದುಕೊಳ್ಳಬೇಕು ಎಂದು ಕರೆ ಕೊಟ್ಟಿದ್ದ ಹಿನ್ನಲೆಯಲ್ಲಿ ಶರಣ್ ಪಂಪ್‌ವೆಲ್‌ ವಿರುದ್ದ ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲು ಮಾಡಿದ್ದಾರೆ.

ವ್ಯಾಪಾರಕ್ಕೆ ಸಂಬಂಧಿಸಿದ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್‌ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್‌ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣವು ದಾಖಲಾಗಿದೆ.

ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿತ್ತು. ಈ ಹಿನ್ನಲೆ ವಿವಾದಕ್ಕೆ ಕಾರಣವಾಗಿದ್ದು, ಬಳಿಕ ಮಧ್ಯೆ ಪ್ರವೇಶಿಸಿದ ಜಿಲ್ಲಾಡಳಿತ ಹಿಂದೂಯೇತರರಿಗೂ ಅಂಗಡಿ ಇಡಲು ಅನುಮತಿ ನೀಡಲಾಗಿತ್ತು. ಹೀಗಾಗಿ ಹಿಂದೂ ವ್ಯಕ್ತಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಇಟ್ಟು ಎಲ್ಲಾ ಹಿಂದೂಗಳು ಸಾಮಗ್ರಿಗಳನ್ನು ಹಿಂದೂಗಳ ಅಂಗಡಿಗಳಿಂದಲೇ ಪಡೆದುಕೊಳ್ಳುವಂತೆ ಹೇಳಿಕೆ ನೀಡಿದ್ದರು.

ಸಾಮರಸ್ಯಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಪೊಲೀಸರು ಶರಣ್ ಪಂಪ್‌ವೆಲ್‌ ವಿರುದ್ದ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ,​ ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *