ಮಂಗಳೂರು: ಬಾಡಿಗೆ ಮನೆಯಿಂದ ನಗ-ನಗದು ಕಳವು

Share with

ಮಂಗಳೂರು: ಮಂಗಳೂರು ನಗರದ ಕದ್ರಿ ಜಾರ್ಜ್ ಮಾರ್ಟಿಸ್ ರೋಡ್ ಸಮೀಪದ ಬಾಡಿಗೆ ಮನೆಯೊಂದರಿಂದ ನಗದು ಹಣ ಹಾಗೂ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಮನೆಯಿಂದ ನಗ-ನಗದು ಕಳವು

ಬಾಡಿಗೆ ಮನೆಯಲ್ಲಿ ಇದ್ದವರು ಡಿ.14ರಂದು ಮೈಸೂರಿಗೆ ತೆರಳಿ ಜ.16ರಂದು ವಾಪಸ್ ಮನೆಗೆ ಬಂದಾಗ ಬಾಗಿಲಿನ ಬೀಗವು ಮುರಿದಿತ್ತು. ಒಳಗೆ ಹೋಗಿ ನೋಡಿದಾಗ ಕಪಾಟಿನ ಲಾಕರ್‌ ನಲ್ಲಿ 70,000 ರೂಪಾಯಿ ನಗದು, ವಾರ್ಡ್ ರೋಬ್ ನ ಸೂಟ್ಕೇಸ್ ನಲ್ಲಿದ್ದ 2 ಬೆಳ್ಳಿಯ ಬಟ್ಟಲು, 1 ಬೆಳ್ಳಿ ಕಲಶ, 1 ಬೆಳ್ಳಿ ಚಮಚ, 1 ಬೆಳ್ಳಿ ಕಪ್, 20 ಬೆಳ್ಳಿ ನಾಣ್ಯಗಳು, ಬೆಳ್ಳಿಸರ, ಬೆಳ್ಳಿಯ ದೀಪ ಸಹಿತ ಸುಮಾರು 56,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.


Share with

Leave a Reply

Your email address will not be published. Required fields are marked *