
ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ದರೋಡೆಕೋರರ ಕಾಟ ಶುರುವಾಗಿದೆ.
ಮೀನು ಸಾಗಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಬಳಿಯಿದ್ದ 1 ಲಕ್ಷದ 61 ಸಾವಿರ ರೂ. ಹಣವನ್ನು ದೋಚಿದ್ದಾರೆ.
ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಲಾರಿಯನ್ನು ಅಡ್ಡಗಟ್ಟಿದ್ದಾರೆ. ಬಳಿಕ ಗಾಜನ್ನು ಒಡೆದು ಚಾಲಕ ಸಲಾಂ ಬಣಕಲ್ ಎಂಬವರ ಮೇಲೆ ಹಲ್ಲೆ ನಡೆಸಿ, ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಪೊಲೀಸ್ ಬೀಟ್ ಹೆಚ್ಚಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.