
ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರ ಅಧಿಕೃತ ನಿವಾಸಕ್ಕೆ ಫಿರಂಗಿ ಶೆಲ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ಜತೆಗಿದ್ದ ಇಬ್ಬರು ಸಿಬ್ಬಂದಿಗಳಿಗೂ ಗಾಯಗಳಿವೆ. ರಾಜ್ ಕುಮಾರ್ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡಿರುವ ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ.

ಇಂದು ಮುಂಜಾನೆ, ಭಾರತ ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದ ಹಲವು ಕಡೆ ಸ್ಫೋಟಗಳ ಶಬ್ದಗಳು ಕೇಳಿಬಂದಿದೆ. ಪಾಕಿಸ್ತಾನವು ತನ್ನ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ರಾಜಧಾನಿ ಇಸ್ಲಾಮಾಬಾದ್ ಬಳಿಯ ರಾವಲ್ಪಿಂಡಿಯ ಗ್ಯಾರಿಸನ್ ನಗರದಲ್ಲಿರುವ ನೂರ್ ಖಾನ್ ವಾಯುನೆಲೆ, ಚಕ್ವಾಲ್ ನಗರದ ಮುರಿಯ್ ವಾಯುನೆಲೆ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಜಾಂಗ್ ಜಿಲ್ಲೆಯ ರಫಿಕಿ ವಾಯುನೆಲೆಗಳ ಮೇಲೆ ಭಾರತ ದಾಳಿಯನ್ನು ನಡೆಸಿದೆ ಎಂದು ಹೇಳಲಾಗಿದೆ
ಸಮುದಾಯ ಜಾಗೃತಿ ಅಭಿಯಾನಗಳನ್ನು ಹೊರತುಪಡಿಸಿ ಮಾಧ್ಯಮಗಳು ತಮ್ಮ ಟಿವಿ ಕಾರ್ಯಕ್ರಮಗಳಲ್ಲಿ ವಾಯುದಾಳಿಯ ವೇಳೆ ಮೊಳಗಿಸಲಾಗುವ ನಾಗರಿಕ ರಕ್ಷಣಾ ಸೈರನ್‌ಗಳ ಶಬ್ದಗಳನ್ನು ಬಳಸದಂತೆ ಎಲ್ಲಾ ಮಾಧ್ಯಮ ವಾಹಿನಿಗಳಿಗೆ ಆದೇಶ ನೀಡಿದೆ. ನಾಗರಿಕ ರಕ್ಷಣಾ ಕಾಯ್ದೆ, 1968ರ ಅಡಿಯಲ್ಲಿ ಹೊರಡಿಸಲಾದ ಈ ಸೂಚನೆ, ಸೈರನ್ ಶಬ್ದಗಳನ್ನು ಆಗಾಗ ಟಿವಿಗಳಲ್ಲಿ ಬಳಸುವುದರಿಂದ ಸಾರ್ವಜನಿಕರ ಸಂವೇದನೆ ಕಡಿಮೆಯಾಗುತ್ತದೆ. ನಿಜವಾದ ವಾಯುದಾಳಿಯ ಸಮಯದಲ್ಲಿ ಸೈರನ್ ಮೊಳಗಿಸಿದಾಗಲೂ ಇದರಿಂದ ಜನರ ಗೊಂದಲಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮತ್ತು ಅಮೆರಿಕದ ನಡುವೆ ಮಧ್ಯಸ್ಥಿಕೆ ವಹಿಸಿದ್ದಾರೆ. ದೀರ್ಘ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದಿದ್ದಾರೆ. ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು “ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ” ತೋರಿಸಿದ್ದಕ್ಕಾಗಿ ಶ್ಲಾಘಿಸಿದ್ದರು. ದಿನಗಟ್ಟಲೆ ಉಲ್ಬಣಗೊಳ್ಳುತ್ತಿದ್ದ ಮಿಲಿಟರಿ ಸಂಘರ್ಷದ ನಂತರ ಯುದ್ಧವನ್ನು ನಿಲ್ಲಿಸಿ ಶಾಂತತೆಯನ್ನು ಪುನಃಸ್ಥಾಪಿಸುವ ಎರಡೂ ದೇಶಗಳ ನಿರ್ಧಾರವನ್ನು ಅವರು ಶ್ಲಾಘಿಸಿದ್ದರು.




