ಜ.11: “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ

Share with

ಮಂಗಳೂರು: ಜ.11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌ ಅವರ ನಿರ್ದೇಶನದ ಕಲಾಸಂಗಮ ಕಲಾವಿದರ ಅಭಿನಯದ “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ ಪ್ರಜ್ವಲನೆಗೈಯಲಿದ್ದಾರೆ” ಎಂದು ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

"ಶಿವದೂತೆ ಗುಳಿಗೆ" ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ

ಈ ಸಂಭ್ರಮ ಕಾರ್ಯಕ್ರಮದಲ್ಲಿ ಪತ್ರಕರ್ತ, ರಂಗಕರ್ಮಿ ಪರಮಾನಂದ ವಿ.ಸಾಲಿಯಾನ್‌ ಅವರಿಗೆ 2024ನೇ ವರ್ಷದ ದಿ| ವನಿತಾ ಆನಂದ ಶೆಟ್ಟಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಿರಿಯ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಖ್ಯಾತ ನಟ ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ನಿರೂಪಕಿ ಅನುಶ್ರೀ ಮುಂತಾದವರು ಭಾಗವಹಿಸಲಿದ್ದಾರೆ.

ಶ್ರೀ ವಿನಯ ಗುರೂಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಾ|ಎಂ.ಎನ್‌.ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖರಾದ ಐಕಳ ಹರೀಶ್‌ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ, ಶಶಿಧರ್‌ ಶೆಟ್ಟಿ ಬರೋಡ, ಆರ್‌.ಕೆ.ನಾಯರ್‌, ಪದ್ಮರಾಜ್‌ ಆರ್‌., ಮನೋಹರ ಪ್ರಸಾದ್‌, ಬಿ.ನಾಗರಾಜ ಶೆಟ್ಟಿ, ಎಸ್‌.ಮಹೇಶ್‌ ಕುಮಾರ್‌, ಕುಮಾರ್‌ ಎನ್‌.ಬಂಗೇರ, ಕಾಸರಗೋಡು ಚಿನ್ನಾ, ಪ್ರಕಾಶ್‌ ಪಾಂಡೇಶ್ವರ, ಹರೀಶ್‌ ಬಂಗೇರ ಭಾಗವಹಿಸಲಿದ್ದಾರೆ. ಬಳಿಕ ಶಿವದೂತೆ ಗುಳಿಗೆ ಪ್ರದರ್ಶನ ನಡೆಯಲಿದ್ದು, ಪ್ರವೇಶ ಉಚಿತ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಟರಾದ ಸ್ವರಾಜ್‌ ಶೆಟ್ಟಿ, ರಜಿತ್‌ ಕದ್ರಿ, ಸಂಗೀತ ನಿರ್ದೇಶಕ ಎ.ಕೆ. ವಿಜಯ್‌ ಕೋಕಿಲ, ಪ್ರಮುಖರಾದ ಚಂದ್ರ ಕೊಡಿಯಾಲ್‌ಬೈಲ್‌, ಪ್ರೇಮ್‌ ಶೆಟ್ಟಿ ಸುರತ್ಕಲ್‌, ನಿತೇಶ್‌ ಪೂಜಾರಿ ಏಳಿಂಜೆ, ಹಿತೇಶ್‌ ಮಂಗಳೂರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *