ದೆಹಲಿ : ರಾಜ್ಯ ಸರ್ಕಾರ ಸಣ್ಣ-ಪುಟ್ಟ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ ಕೊಟ್ಟು, ರಾಜ್ಯ ಸರ್ಕಾರಕ್ಕೂ & GST ನೋಟಿಸ್ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

GST ಯಲ್ಲಿ ಕೇಂದ್ರ ಸರ್ಕಾರದ CGST & ರಾಜ್ಯ ಸರ್ಕಾರಗಳ SGST ಎಂಬ 2 ಭಾಗಗಳಿವೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರದ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ.




