ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರು ವಿಚಾರಣೆ ವೇಳೆ ಕುಸಿದು ಬಿದ್ದಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆ.೧೫ರಂದು ಬೆಳಿಗ್ಗೆ ೮ ಗಂಟೆಯ ಸಮಯದಲ್ಲಿ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆ ತರಲಾಗಿದ್ದು, ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿ ಕುಸಿದು ಬಿದ್ದಿದ್ದು, ಕೊಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರಿಗೆ ತುರ್ತು ಚಿಕಿತ್ಸಾ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.